Cover of Gruhabhanga

Gruhabhanga

Sample

Get 30 days of Standard free

€5.99/mo after trial. Cancel monthly.
Try for €0.00
More purchase options

Gruhabhanga

By: S. L. Bhyrappa
Narrated by: Various Artists
Try for €0.00

€5.99 a month after 30 days. Cancel anytime.

Buy Now for €19.54

Buy Now for €19.54

Season's Savings | 0.99 €/month for 3 months

5.99 €/month thereafter - terms apply. Cancel monthly.
ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. ‘ಗೃಹಭಂಗ’ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುತ್ತದೆ, ಬದುಕಿಗೆ ಬದುಕೇ ಬರೆದ ಭಾಷ್ಯ. ‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಗೃಹಭಂಗ ಎಂಬುದು ಈ ಕೃತಿಯ ಕೇಂದ್ರಕಲ್ಪನೆಯಲ್ಲ. ಜೀವನಚಿತ್ರಣದ ಪ್ರಯತ್ನವೇ ಇದರ ದೃಷ್ಟಿ. ಇಲ್ಲಿ ಮನೆ ಒಡೆಯುವುದು, ಮುರಿಯುವುದು ಮಾತ್ರವಲ್ಲ; ಪ್ಲೇಗು, ಕಜ್ಜಿ, ಬರ, ಮೊದಲಾಗಿ ಇನ್ನೂ ಎಷ್ಟೋ ಸಂಗತಿಗಳು, ವಿವಿಧ ರೀತಿಯ ಪಾತ್ರಗಳು ಬರುತ್ತವೆ. ಇವು ಮೂಡಿ ನಡೆದಂತೆ ಒಂದು ಜೀವನ ದೃಷ್ಟಿಯ ಹಿನ್ನೆಲೆಯಲ್ಲಿ ಮಸುಕು ಮಸುಕಾಗಿ ಕಾಣಬಹುದು.
adbl_web_anon_alc_button_suppression_t1
No reviews yet